ಅಲ್ಪಜ್ಞಾನಿ ಪ್ರಕೃತಿ ಸ್ವಭಾವಿ ಮಧ್ಯಮಜ್ಞಾನಿ ವೇಷಧಾರಿ ಅತೀತಜ್ಞಾನಿ ಆರೂಢ. ಆರೂಢನಾದರೂ ಅರಿಯಬಾರದಯ್ಯಾ. ಜ್ಞಾನವನರಿಯದಾತ ಅಜ್ಞಾನಿ ನಾಮನಷ್ಟ. ಈ ಚತುರ್ವಿಧದೊಳಗೆ ಆವಂಗವೂ ಇಲ್ಲ ಗುಹೇಶ್ವರಾ_ನಿಮ್ಮ ಶರಣ.