ಅವಿರಳ ವಿಟನ ಮದುವೆಗೆ ನಿಬ್ಬಣಗಿತ್ತಿಯರೆಲ್ಲ ಬಂದು ಕೆಂಡದ ದಂಡೆಯನೆ ಮುಡಿದು
ಅಂಡಜವೆಂಬ ಅರಿಷಿಣವ ಮಿಂದು
ಉರಿಯೆಂಬ ಹಚ್ಚಡದ ಹೊಂದಿಕೆ (ಹೊದಿಕೆ?)ಯಲ್ಲಿ_ ನಿಬ್ಬಣಗಿತ್ತಿಯರು ಬಪ್ಪ ಭರವ ಕಂಡು ನೀರಲಡಿಗೆಯ ಮಾಡಿ; ವಾಯದ ಕೂಸಿಂಗೆ ಮಾಯದ ಮದವಣಿಗ; ಸಂಗ ಸಂಯೋಗವಿಲ್ಲದೆ ಬಸುರಾಯಿತ್ತು. ಕೂಸೆದ್ದು ಕುಣಿದಾಡಿ ಸೂಲಗಿತ್ತಿಯನವಗ್ರಹಿಸಿತ್ತು. ಗುಹೇಶ್ವರಾ ಒಬ್ಬ ಇಬ್ಬ ಮೂವರು ತ್ರಿದೇವತೆಗಳು ಬಲ್ಲರೆ ಆ ಲಿಂಗದ ಘನವನು?