ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ ಒಬ್ಬರಿಗಾಳಾಗಿ, ಒಬ್ಬರನೋಲೈಸುವ ನಿರ್ಬುದ್ಧಿಮನುಜರನೇನೆಂಬೆ, ಕೂಡಲಸಂಗಮದೇವಾ !