ಅಷ್ಟವಿಧಾರ್ಚನೆ ಷೋಡಶೋಪಚಾರಂಗಳನು
ಅರಸರಿಯದ ಬಿಟ್ಟಿ ಮಾಡುವೆನು. ಎನ್ನ ತಾಗಿದ ಸುಖವ ಜಂಗಮಕ್ಕರ್ಪಿಸಲರಿಯದ ಉಪಚಾರಿಯಾನು. ಸ್ಥಾವರ ಜಂಗಮವನರಿಯದ ಪೂಜಕ ನಾನು. ಮತ್ತೆ ನಾಚದೇ ಕೂಡಲಸಂಗಮದೇವಯ್ಯಾ ಜಂಗಮವೆನ್ನ ಪ್ರಾಣಲಿಂಗವೆಂಬೆನು. 380