ಅಸ್ಥಿಗೆ ಚರ್ಮವಾಧಾರವಾಗಿ ಪ್ರಾಣಕ್ಕೆ ಪ್ರಸಾದ ಮೃತ್ತಿಕೆಯಾಗಿ(ಗೆ?) ಪ್ರಾಣ ಲಿಂಗವಲ್ಲೊ! ಪ್ರಾಣಲಿಂಗವೆಂಬುದು ಕರಕಷ್ಟ ನೋಡಾ. ಪ್ರಾಣಲಿಂಗವೆಂಬುದು ಕರನಾಚಿಕೆ ನೋಡಾ. ಒಡೆದ ಮಡಕೆಗೆ ಒತ್ತಿ ಮಣ್ಣ ಮೆತ್ತಿದಡೆ ಅದು ತರಹರವಾಗಬಲ್ಲುದೆ ಗುಹೇಶ್ವರಾ?