ಆಡು ಮಂದರಗಿರಿಯ ಕೋಡು ಬ್ರಹ್ಮಶಿಖಿಯ ಬೇಡಿತ್ತನೀವ ವರದಾನಿಯನೇನೆಂಬೆನು? ಆಡುತ್ತಾಡುತ್ತ ಅನಲನುರಿದು ಎರಡೊಂದಾದ ಪರಿಯ ನೋಡಾ! ನೋಡುತ್ತ ನೋಡುತ್ತ ಅನಲನಲ್ಲಿಯೆ ಅರತು ಕೂಡಿದ ಮಹಾಘನವನೇನೆಂಬೆನು ಗುಹೇಶ್ವರಾ ?