ಆದಿಯಲ್ಲಿ ನೀನೆ ಗುರುವಾದ ಕಾರಣ ನಿನ್ನಿಂದ ಹುಟ್ಟಿತ್ತು ಲಿಂಗ. ಆದಿಯಲ್ಲಿ ನೀನೆ ಲಿಂಗವಾದ ಕಾರಣ ನಿನ್ನಿಂದ ಹುಟ್ಟಿತ್ತು ಜಂಗಮ. ಆದಿಯಲ್ಲಿ ನೀನೆ ಜಂಗಮವಾದ ಕಾರಣ ನಿನ್ನಿಂದ ಹುಟ್ಟಿತ್ತು ಪ್ರಸಾದ. ಆದಿಯಲ್ಲಿ ನೀನೆ ಪ್ರಸಾದಿಯಾದ ಕಾರಣ ನಿನ್ನಿಂದ ಹುಟ್ಟಿತ್ತು ಪಾದೋದಕ. ಇಂತೀ_ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ಸ್ವರೂಪ ನೀನೆಯಾದ ಕಾರಣ; ಜಂಗಮ ಪ್ರಾಣಿಯಾಗಿ ಸದಾಚಾರಿಯಾದೆ
ಅದು ಕಾರಣ ನೀನೆ ಸರ್ವಾಚಾರಸಂಪನ್ನನಾಗಿ
ಪೂರ್ವಾಚಾರಿ[ಯೂ] ನೀನೆಯಾದೆ
[ಅದು] ಕಾರಣ
ಗುಹೇಶ್ವರಲಿಂಗದಲ್ಲಿ ಚಂದಯ್ಯಂಗೆ. ಲಿಂಗದ ನಿಜವ ತಿಳುಹಾ ಸಂಗನಬಸವಣ್ಣಾ !