ಆದಿಲಿಂಗ
ಅನಾದಿ ಶರಣನೆಂಬುದು ತಪ್ಪದು; ಆದಿ ಗುರು
ಅನಾದಿ ಶಿಷ್ಯನೆಂಬುದು ತಪ್ಪದು. ಗುರುವಿಂಗೆ ಶಿಷ್ಯಂಗೆ ಏನು ದೂರ ದೇವಾ ? ಮುಳ್ಳುಗುತ್ತುವಡೆ ತೆರಹಿಲ್ಲದ ಪರಿಪೂರ್ಣ ಘನವು. ಒಬ್ಬರಲ್ಲಿ ಒಂದು ಭಾವವುಂಟೆ ? ಎನ್ನೊಳಗೆ ಬೆಳಗುವ ಜ್ಞಾನ
ನಿನ್ನ ಹೃದಯಕಮಲದೊ?ಗಣ ಆವ್ಯಕ್ತಲಿಂಗ. ನಿನ್ನೊಳು ತೊಳಗಿ ಬೆಳಗುವ ಜ್ಯೋತಿರ್ಲಿಂಗ ಎನ್ನಂತರಂಗದ ಸುಜ್ಞಾನಲಿಂಗ. ಒಂದರಲ್ಲಿ ಒಂದು ಬಿಚ್ಚಿ ಬೇರೆ ಮಾಡಬಾರದಾಗಿ
ಪ್ರಾಣಲಿಂಗ ಒಂದೆ
ಉಪದೇಶ ಒಂದೆ
ಕ್ರಿಯಾಕರ್ಮ ಒಂದೆ. ನೀವಿನ್ನಾವುದ ಬೇರೆಮಾಡಿ ನುಡಿವಿರಯ್ಯಾ ? ಕಾರ್ಯದಲ್ಲಿ ಗುರುವಾಗಿ
ಅಂತರಂಗಕ್ಕೆ ಸುಜ್ಞಾನೋಪದೇಶವ ಮುನ್ನವೆ ಮಾಡಿದ ಬಳಿಕ ಕ್ರೀಯಿಂದ ಮಾಡಲಮ್ಮೆನೆಂದಡೆ ಹೋಹುದೆ ? ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಎನಗೆ ನೀವು ಉಪದೇಶವ ಮಾಡಿದಡೆ ಮರ್ತಲೋಕದ ಮಹಾಗಣಂಗ? ಕೈಯಲ್ಲಿ ಅಹುದಹುದೆನಿಸುವೆ ಕಾಣಾ ಸಂಗನಬಸವಣ