ಆದಿವಿಡಿದು ಬಹಾತ ಭಕ್ತನಲ್ಲ,


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆದಿವಿಡಿದು ಬಹಾತ ಭಕ್ತನಲ್ಲ
ಅನಾದಿವಿಡಿದು ಬಹಾತ ಮಾಹೇಶ್ವರನಲ್ಲ. ಸ್ಥಲವಿಡಿದು ಬಹಾತ ಪ್ರಸಾದಿಯಲ್ಲ
ಇಷ್ಟಲಿಂಗದಲ್ಲಿ ಪ್ರಸಾದವ ಕೊಂಬಾತ ಪ್ರಾಣಲಿಂಗಿಯಲ್ಲ
ಲಿಂಗವಿಡಿದು ಬಹಾತ ಶರಣನಲ್ಲ
ಭಿನ್ನಭಾವವಿಡಿದು ಬಹಾತ ಐಕ್ಯನಲ್ಲ
ಶೂನ್ಯಕಾಯವ ನಿಶ್ಶೂನ್ಯಂಗಿಕ್ಕಿ
ಪ್ರಾಣಲಿಂಗಪ್ರಸಾದವ ಕೊಳಬಲ್ಲನಾಗಿ ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು