ಆಧಾರದಲ್ಲಿ ಅನಾಹತದಲ್ಲಿ ಗುರುಸಂಬಂಧವು.


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಧಾರದಲ್ಲಿ ಗುರುಸಂಬಂಧವು. ಸ್ವಾಧಿಷಾ*ನದಲ್ಲಿ ಲಿಂಗಸಂಬಂಧವು. ಮಣಿಪೂರಕದಲ್ಲಿ ಜಂಗಮಸಂಬಂಧವು. ಅನಾಹತದಲ್ಲಿ ಪಾದೋದಕಸಂಬಂಧವು. ವಿಶುದ್ಧಿಯಲ್ಲಿ ಪ್ರಸಾದಸಂಬಂಧವು. ಆಜ್ಞೇಯದಲ್ಲಿ ಅರುಹುಸಂಬಂಧವು. ಈ ಅರುಹುವಿಡಿದು ಗುರುವ ಕಂಡು
ಲಿಂಗವ ನೋಡಿ
ಜಂಗಮವ ಕೂಡಿ
ಪಾದೋದಕ ಪ್ರಸಾದದ ಘನವ ಕಾಂಬುದೆ ಅಂತರಂಗವೆನಿಸುವುದು. ಈ ಅಂತರಂಗದ ವಸ್ತುವು ಭಕ್ತಹಿತಾರ್ಥವಾಗಿ ಬಹಿರಂಗಕ್ಕೆ ಬಂದಲ್ಲಿ
ಗುರುಭಕ್ತಿ
ಲಿಂಗಪೂಜೆ
ಜಂಗಮಾರಾಧನೆ
ಪಾದೋದಕಪ್ರಸಾದ ಸೇವನೆಯ ಪ್ರೇಮವುಳ್ಳಡೆ ಬಹಿರಂಗವೆನಿಸುವುದು. ಇಂತೀ ಅಂತರಂಗ ಬಹಿರಂಗದ ಮಾಟಕೂಟವ ಬಿಡದಿರ್ಪ ಪರಮಪ್ರಸಾದಿಗಳ ಒಳಹೊರಗೆ ಭರಿತನಾಗಿರ್ಪನು ನಮ್ಮ ಅಖಂಡೇಶ್ವರನು.