ಆಯಿತ್ತೆ ಉದಯಮಾನ ಹೋಯಿತ್ತೆ ಅಸ್ತಮಾನ. ಅಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವು ! ಕತ್ತಲೆಗವಿಯಿತ್ತು ಮೂರು ಲೋಕದೊಳಗೆ. ಇದರಚ್ಚುಗವೇನು ಹೇಳಾ ಗುಹೇಶ್ವರಾ ?