ಆರುಸ್ಥಲದಲ್ಲಿ ಅರಿತಿಹೆನೆಂದು ಸಹಭೋಜನದಲ್ಲಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆರುಸ್ಥಲದಲ್ಲಿ ಅರಿತಿಹೆನೆಂದು ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ ! ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ
ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ ! ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು ! ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ ! ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ ಗುಹೇಶ್ವರಾ.