ಆವನೊಬ್ಬನು ಉಪಪಾತಕ ಮಹಾಪಾತಕಂಗಳ ಮಾಡಿ
ಶ್ರೀ ರುದ್ರಾಕ್ಷಿಯ ನಾಮೋಚ್ಚರಣೆಯ ಮಾಡಿದಡೆ ಆ ಪಾತಕಂಗಳು ಪರಿಹಾರವಾಗಿ ಹತ್ತುಸಾವಿರ ಗೋದಾನದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಸ್ವರೂಪವನು ಕಂಗಳು ತುಂಬಿ ನೋಡಿದಡೆ ಶತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮುಟ್ಟಿ ಮುಟ್ಟಿ ಪೂಜಿಸಿದಡೆ ಸಹಸ್ರಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ತತ್ ಸ್ಥಾನಂಗಳಲ್ಲಿ ಭಕ್ತಿಯಿಂದೆ ಧರಿಸಿದಡೆ ಲಕ್ಷಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಆ ರುದ್ರಾಕ್ಷಿಯ ಮಣಿಗಳಿಂದೆ ಜಪವ ಮಾಡಿದಡೆ ಅನಂತಕೋಟಿ ಪುಣ್ಯದ ಫಲವು ಕೈಸಾರುತಿಪ್ಪುದು ನೋಡಾ. ಅದೆಂತೆಂದೊಡೆ : ``ಸಪ್ತಕೋಟಿಶತಂ ಪುಣ್ಯಂ ಲಭತೇ ಧಾರಣಾತ್ ನರಃ