ಆವಾವ ಪರಿಯಲ್ಲಿ ಆವಾವ ಭಾವದಲ್ಲಿ ಗುರುಲಿಂಗಜಂಗಮಕ್ಕೆ ದಾಸೋಹವ ಮಾಡಿಹೆನೆಂಬ ಕೂಡಿಹೆನೆಂಬ ಸದ್ಭಕ್ತರ ಬಾಗಿಲ ತೋರಿ ಬದುಕಿಸಯ್ಯಾ. ಎಲ್ಲವನೊಪ್ಪಿ `ಲಿಂಗಜಂಗಮವೆನ್ನ ಪ್ರಾಣೇಶ್ವರ' ಎಂಬ ಮಹಾಪುರಾತನರ ಪಾದರಕ್ಷೆಯ ಹೊತ್ತಿರಿಸೆನ್ನನು ಕೂಡಲಚೆನ್ನಸಂಗಮದೇವಾ.