ಆಶೆಯಾಮಿಷವಳಿದು ಹುಸಿ ವಿಷಯಂಗಳೆಲ್ಲ ಹಿಂಗಿ ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ. ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಾ ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯಾ.