ಆ ಮೂಲಮಂತ್ರಮೂರ್ತಿಯ ನಿಲುಕಡೆಯ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆ ಮೂಲಮಂತ್ರಮೂರ್ತಿಯ ನಿಲುಕಡೆಯ ಕೇಳಿರಯ್ಯ ಶರಣಗಣಂಗಳೆ; ಬ್ರಹ್ಮಾಂಡ ಮಧ್ಯದಲ್ಲಿ ಪಿಂಡಾಕೃತಿಯ ಧರಿಸಿ
ಆ ಪೂರ್ವಾಶ್ರಯ ಸ್ವರೂಪವಾದ ಪಿಂಡಬ್ರಹ್ಮಾಂಡಗಳ ಜೀವನವರ್ತನ_ ದುರ್ಮಾರ್ಗ_ದುರ್ನಡತೆ_ದುರಾಚಾರ_ದುರ್ಗುಣಂಗಳ ತ್ಯಜಿಸಿ
ಗುರು ಲಿಂಗ ಜಂಗಮ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ
ಶರಣ ಐಕ್ಯಗಣಂಗಳಲ್ಲಿ ಒಪ್ಪುತಿರ್ಪರು ನೋಡಾ
_ ನಿರವಯ ಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.