ಇಂದಿಂಗೆಂತು ನಾಳಿಂಗೆಂತು ಎಂದು- ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ. ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ ಕೂಡಲಸಂಗಮದೇವಾ.