ಇಟ್ಟಿಯ ಹಣ್ಣ ನರಿ ತಿಂದು ಸೃಷ್ಟಿ ತಿರುಗಿತ್ತೆಂಬಂತೆ ಮಟ್ಟಿಯನಿಟ್ಟ ದ್ವಿಜರ ಮಾತದೇಕೆ ಹಗಲುಗಾಣದ ಗೂಗೆ ಇರುಳಾಯಿತ್ತೆಂದಡೆ ಜಗಕ್ಕೆ ಇರುಳಪ್ಪುದೆ ಮರುಳೆ ಹೋಮದ ನೆವದಲ್ಲಿ ಹೋತನು ಕೊಂದು ತಿಂಬ ಅನಾಮಿಕರೊಡನಾಡಿ ಗೆಲಿವುದೇನು ಕೂಡಲಸಂಗಮದೇವಾ.