Pages(key to [[Help:Page Status{{!}}Page Status]])
ಇಡುವ ಕೊಡುವ ಬಿಡುವ ಕಟ್ಟುವ ಗೊಡವೆಗಾರನಯ್ಯಾ; ಶರಣನು ಗಾಳಿಯ ಮರೆಯ ಜ್ಯೋತಿಯಂತೆ ಸುಖಸೂಸದೆ ಇಪ್ಪನು. ತನ್ನರಿವು ಮರವೆಗಳೆಲ್ಲಾ ಪ್ರಾಣಲಿಂಗಾಧೀನವಲ್ಲದೆ ಮತ್ತೊಂದನರಿಯನು. ಆಸರುವನಲ್ಲ ಬೇಸರುವನಲ್ಲ; ಜಗದ ಕಳಕಳಕ್ಕೆ ಎದ್ದು ಹರಿದಾಡುವನಲ್ಲ. ಸುಖಮುದ್ರಿತನು ಕೂಡಲಚೆನ್ನಸಂಗಾ ಲಿಂಗೈಕ್ಯನು.