ಇದು ಲೇಸಾಯಿತ್ತು: ತುಂಬಿದ ಲೆಕ್ಕಕ್ಕೆ ಮತ್ತೊಂದೆಂದು ಕಡೆಗಾಣಿಸುವಂತೆ ಸ್ಥಾಣುವಿನ ಮರೆಯ ಚೋರನಂತೆ ಅಂಬುಧಿಯ ಕೊಂಬಿನಲ್ಲಿದ್ದ ವಿಹಂಗನಂತೆ ಎಲ್ಲಿ ಬಂದಡೂ ಗುಹೇಶ್ವರನೆಂಬ ಭಾವ ಒಂದಾಯಿತ್ತು !