ಇರುಳಿನ ಮುಖದೊಳಗೊಂದು ನವರತ್ನದಖಂಡಿತ ಹಾರವಡಗಿತ್ತು. ಹಗಲಿನ ಮುಖದೊಳಗೊಂದು ನವಚಿತ್ರಪತ್ರದ ವೃಕ್ಷವಡಗಿತ್ತು. ರತ್ನದ ಹಾರವ ವೃಕ್ಷಕ್ಕಾಹಾರವನಿಕ್ಕಿದಡೆ ಗುಹೇಶ್ವರಲಿಂಗದಲ್ಲಿ ಪ್ರಾಣಲಿಂಗಕ್ಕೆ ಸುಖವಾಯಿತ್ತು.