ಇಲ್ಲವೆಯ ಮೇಲೊಂದು ಉಂಟೆಂಬ ಪರಿಭಾವ ಅಲ್ಲಿ ಇಲ್ಲಿ ಎನ್ನದೆ ತಾನೆ ನಿಂದಿತ್ತು ನೋಡಾ ! ತನ್ನಲ್ಲಿಯ ಪ್ರಕೃತಿಯ ತಾನೆ ಹಿಂಗಿಸಲು; ಅಲ್ಲಿಯೆ ಜ್ಞಾನ ಉದಯಿಸಿತ್ತು ! ಎಲ್ಲಾ ಎಡೆಯಲ್ಲಿ ನಿಂದ ನಿಜಪದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.