ಇಷ್ಟಲಿಂಗವೆ ಪ್ರಾಣಲಿಂಗವೆಂಬ ಮಿಟ್ಟಿಯ ಭಂಡರು ನೀವು ಕೇಳಿರೆ. ಇಷ್ಟಲಿಂಗವನೂ ಕಾಯವನೂ ಮೆಟ್ಟಿ ಹೂಳುವಲ್ಲಿ ಬಿಟ್ಟು ಹೋಹ ಪ್ರಾಣಕ್ಕೆ ಇನ್ನಾವುದು ಲಿಂಗ ಹೇಳಾ ಗುಹೇಶ್ವರಾ ?