ಈ ಪ್ರಕಾರದಲ್ಲಿ ಗುರುವಿನ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಈ ಪ್ರಕಾರದಲ್ಲಿ ಗುರುವಿನ ಹಸ್ತದಲ್ಲಿ ಹುಟ್ಟಿ ಲಿಂಗದೇಹಿಯೆನಿಸಿಕೊಂಡ ಜ್ಞಾನಿಪುರುಷನು ತನ್ನ ಜ್ಞಾನಸ್ವರೂಪವನರಿಯಬೇಕಯ್ಯ. ಆ ಜ್ಞಾನವೇ ಆರುತೆರನಾಗಿಪ್ಪುದು. ಅವಾವವೆಂದಡೆ: ಆಚಾರಲಿಂಗ
ಗುರುಲಿಂಗ
ಶಿವಲಿಂಗ
ಜಂಗಮಲಿಂಗ
ಪ್ರಸಾದಲಿಂಗ
ಮಹಾಲಿಂಗವೆಂದು ಇಂತೀ ಆರುತೆರನಾಗಿಪ್ಪುದು. ಈ ಷಡ್ವಿಧವ್ರತವನರಿದು ಆಚರಿಸುವ ಕ್ರಮವೆಂತುಟಯ್ಯಯೆಂದಡೆ: ಆಧಾರಚಕ್ರಸ್ಥಾನದಲ್ಲಿ ನಾಲ್ಕೆಸಳಕಮಲದ ವ ಶ ಷ ಸಯೆಂಬ ನಾಲ್ಕು ಬೀಜಾಕ್ಷರದ ಪೃಥ್ವಿತತ್ವದ ಕೆಂಪುವರ್ಣದ ನೆಲೆಯನರಿಯಬೇಕಯ್ಯ. ಸ್ವಾಧಿಷಾ*ನಚಕ್ರದಲ್ಲಿ ಆರೆಸಳಕಮಲದ ಬ ಭ ಮ ಯ ರ ಲಯೆಂಬ ಆರು ಬೀಜಾಕ್ಷರ ಯುಕ್ತವಾದ ಅಪ್ಪುತತ್ವದ ನೀಲವರ್ಣದ ನೆಲೆಯನರಿಯಬೇಕಯ್ಯ. ಮಣಿಪೂರಕಚಕ್ರಸ್ಥಾನದಲ್ಲಿ ಹತ್ತೆಸಳಕಮಲದ ಡ ಢ ಣ ತ ಥ ದ ಧ ನ ಪ ಫ ಯೆಂಬ ಹತ್ತು ಬೀಜಾಕ್ಷರ ಸ್ವಾಯತವಾಗಿಪ್ಪ ಅಗ್ನಿತತ್ವದ ಕುಂಕುಮವರ್ಣದ ನೆಲೆಯನರಿಯಬೇಕಯ್ಯ. ಅನಾಹತಚತ್ರಸ್ಥಾನದಲ್ಲಿ ಹನ್ನೆರಡೆಸಳಕಮಲದ ಕ ಖ ಗ ಘ ಙ ಚ ಛ ಜ ರುsು ಞ ಟ ಠಯೆಂಬ ಹನ್ನೆರಡು ಬೀಜಾಕ್ಷರಯುಕ್ತವಾಗಿರ್ಪ ವಾಯುತತ್ವದ ಶ್ವೇತವರ್ಣದ ನೆಲೆಯನರಿಯಬೇಕಯ್ಯ. ವಿಶುದ್ಧಿಚಕ್ರಸ್ಥಾನದಲ್ಲಿ ಹದಿನಾರೆಸಳಕಮಲದ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಹದಿನಾರು ಬೀಜಾಕ್ಷರ ಸ್ವಾಯತವಾಗಿಪ್ಪ ಆಕಾಶತತ್ವದ ಸ್ಫಟಿಕವರ್ಣದ ನೆಲೆಯನರಿಯಬೇಕಯ್ಯ. ಆಜ್ಞಾಚಕ್ರಸ್ಥಾನದಲ್ಲಿ ಎರಡೆಸಳಕಮಲದ ಹಂ ಸ ಯೆಂಬ ಎರಡು ಬೀಜಾಕ್ಷರಯುಕ್ತವಾಗಿಪ್ಪ ಆತ್ಮತತ್ವದ ಮಾಣಿಕ್ಯವರ್ಣದ ನೆಲೆಯನರಿಯಬೇಕಯ್ಯ. ಇವೆಲ್ಲವಕ್ಕೂ ಮೇಲಣತತ್ವವೆನಿಸುವ ಬ್ರಹ್ಮರಂದ್ರದಲ್ಲಿ ಸಾವಿರೆಸಳಕಮಲದ
ಸಾವಿರ ಬೀಜಾಕ್ಷರ ಸರ್ವತೋಮುಖವಾಗಿಪ್ಪ ಭೇದವನರಿಯಬೇಕಯ್ಯ. ಇನ್ನೀ ಚಕ್ರಂಗಳಿಗೆ ಲಿಂಗಸ್ವಾಯತಯುಕ್ತವಾಗಿಪ್ಪ ಭೇದವ ಹೇಳಿಹೆನು: ಆಧಾರಚಕ್ರದ ನಾಲ್ಕೆಸಳಕಮಲದ ಮಧ್ಯದಲ್ಲಿ ಆಚಾರಲಿಂಗವ ಸ್ವಾಯತವ ಮಾಡಿ ಸ್ವಾಧಿಷಾ*ನಚಕ್ರದ ಆರೆಸಳಕಮಲದ ಮಧ್ಯದಲ್ಲಿ ಗುರುಲಿಂಗವ ಮೂರ್ತಿಗೊಳಿಸಿ ಮಣಿಪೂರಕಚಕ್ರದ ಹತ್ತೆಸಳಕಮಲದ ಮಧ್ಯದಲ್ಲಿ ಶಿವಲಿಂಗವ ಸಂಬಂಧಿಸಿ ಅನಾಹತಚಕ್ರದ ಹನ್ನೆರಡೆಸಳಕಮಲದ ಮಧ್ಯದಲ್ಲಿ ಪ್ರಸಾದಲಿಂಗವ ಮೂರ್ತಿಗೊಳಿಸಿ ಆಜ್ಞಾಚಕ್ರದ ಎರಡೆಸಳಕಮಲದ ಮಧ್ಯದಲ್ಲಿ ಮಹಾಲಿಂಗವ ನೆಲೆಗೊಳಿಸಿ ಪ್ರಾಣದಲ್ಲಿ ಆಚಾರಲಿಂಗವ ಸಂಬಂಧಿಸಿ ಜಿಹ್ವೆಯಲ್ಲಿ ಗುರುಲಿಂಗವ ಸ್ವಾಯತವಮಾಡಿ ನೇತ್ರದಲ್ಲಿ ಶಿವಲಿಂಗವ ಮೂರ್ತಿಗೊಳಿಸಿ ತ್ವಕ್ಕಿನಲ್ಲಿ ಜಂಗಮಲಿಂಗವ ನೆಲೆಗೊಳಿಸಿ ಶ್ರೋತ್ರದಲ್ಲಿ ಪ್ರಸಾದಲಿಂಗವ ಸಂಬಂಧಿಸಿ ಭಾವದಲ್ಲಿ ಮಹಾಲಿಂಗವ ನೆಲೆಗೊಳಿಸಿ ಬ್ರಹ್ಮರಂಧ್ರದಲ್ಲಿರ್ಪ ಪರಿಪೂರ್ಣಲಿಂಗವು ಸರ್ವಾಂಗದಲ್ಲಿಯು ಸ್ವಾಯತವಾಗಲು ಅಂಗಸಂಗಗಳೆಲ್ಲವು ಲಿಂಗಸಂಗಗಳಾಗಿ ಲಿಂಗ ದೃಕ್ಕೇ ನಿರಂತರ ಪ್ರಕಾಶಿಸುತಿಪ್ಪುದಯ್ಯ. ಲಿಂಗಪ್ರಭೆಯೊಳಗೆ ಶಿವಶಿವಾಯೆನುತಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.