ಉಂಡೆನುಟ್ಟೆನೆಂಬ ಸಂದೇಹ ನಿನಗೇಕಯ್ಯಾ? ಉಂಬುದೆ ಅಗ್ನಿ? ಉಡುವುದೆ ಪೃಥ್ವಿ? ನೀನೆಂದು ಉಂಡೆ? ನಾನೆಂದು ಕಂಡೆ? ಉಣ್ಣದೆ ಉಡದೆ ಹೊಗೆಯ ಕೈಯಲ್ಲಿ ಸತ್ತೆನೆಂಬ ಅಂಜಿಕೆ ನಿನಗೆ ಬೇಡ ಅಂಜದಿರು_ ಗುಹೇಶ್ವರಾ ನಿನಗಾವ ನಾಚಿಕೆಯೂ ಇಲ್ಲ.