ಉಂಬುದು ಉಡುವುದು ಶಿವಾಚಾರ,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಉಂಬುದು ಉಡುವುದು ಶಿವಾಚಾರ
ಕೊಂಬುದು ಕೊಡುವುದು ಕುಲಾಚಾರ ಎಂಬ ಅನಾಚಾರಿಯ ಮಾತ ಕೇಳಲಾಗದು. ವಿಪ್ರ ಮೊದಲು ಅಂತ್ಯಜ ಕಡೆಯಾಗಿ ಶಿವಭಕ್ತರ ಒಂದೆ ಎಂದು ಕೊಟ್ಟು ಕೊಂಬುದು ಸದಾಚಾರ
ಉಳಿದುದೆಲ್ಲ ಅನಾಚಾರ. ಅದೆಂತೆಂದಡೆ; ಸ್ಫಟಿಕದ ಕೊಡದಲ್ಲಿ ಕಾಳಿಕೆಯನರಸುವ ಹಾಗೆ
ಸಿಹಿಯೊಳಗೆ ಕಹಿಯನರಸುವ ಹಾಗೆ
ರಜಸ್ಸೂತಕ ಕುಲಸೂತಕ ಜನನಸೂತಕ ಪ್ರೇತಸೂತಕ ಉಚ್ಛಿಷ್ಟಸೂತಕ ಎಂದಡೆ
ಆತಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ತೀರ್ಥಪ್ರಸಾದವಿಲ್ಲ. ಇಂತೀ ಪಂಚಸೂತಕವ ಕಳೆದಲ್ಲದೆ ಭಕ್ತನಾಗ. ಇಂತಹ ಭಕ್ತರಲ್ಲಿ ಕೊಟ್ಟು ಕೊಂಬುದು ಸದಾಚಾರ- ಕೂಡಲಚೆನ್ನಸಂಗಮದೇವಾ