ಉತ್ತಮಕುಲದಲ್ಲಿ ಹುಟ್ಟಿದೆನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯಾ


Pages   (key to Page Status)   

ಉತ್ತಮಕುಲದಲ್ಲಿ ಹುಟ್ಟಿದೆನೆಂಬ ಕಷ್ಟತನದ ಹೊರೆಯ ಹೊರಿಸದಿರಯ್ಯಾ, ಕಕ್ಕಯ್ಯನೊಕ್ಕುದನಿಕ್ಕ ನೋಡಯ್ಯಾ, ದಾಸಯ್ಯಾ ಶಿವದಾನವನೆರೆಯ ನೋಡಯ್ಯಾ, ಮನ್ನಣೆಯ ಚೆನ್ನಯ್ಯನೆನ್ನುವ ಮನ್ನಿಸ. ಉನ್ನತ ಮಹಿಮ, ಕೂಡಲಸಂಗಮದೇವಾ, ಶಿವಧೋ ಶಿವಧೋ !