ಉರಿವ ಕಿಚ್ಚಿನೊಳಗೆ ಹಾಯ್ಕಿದಡೆ ಬೆಂದಿತ್ತೆಂದರಿಯಬಾರದು ಬೇಯದೆಂದರಿಯಬಾರದು. ಹಿಡಿದು ಸುಟ್ಟು ಬೂದಿಯ ಹೂಸಿಕೊಂಡಡೆ ಮರಳಿ ಹುಟ್ಟಲಿಲ್ಲ ಕಾಣಾ ಗುಹೇಶ್ವರಾ.