ಉಳ್ಳುದೊಂದು ತನು ಉಳ್ಳುದೊಂದು ಮನ. ನಾನಿನ್ನಾವ ಮನದಲ್ಲಿ ಧ್ಯಾನವ ಮಾಡುವೆನಯ್ಯಾ ? ಸಂಸಾರವನಾವ ಮನದಲ್ಲಿ ತಲ್ಲೀಯವಾಹೆನಯ್ಯಾ ? ಅಕಟಕಟಾ ಕೆಟ್ಟೆ ಕೆಟ್ಟೆ ? ಸಂಸಾರಕ್ಕಲ್ಲಾ ಪರಮಾರ್ಥಕ್ಕಲ್ಲಾ ? ಎರಡಕ್ಕೆ ಬಿಟ್ಟ ಕರುವಿನಂತೆ ? ಬಿಲ್ವ ಬೆಳವಲಕಾಯನೊಂದಾಗಿ ಹಿಡಿಯಬಹುದೆ ಚೆನ್ನಮಲ್ಲಿಕಾರ್ಜುನಾ ?