ಎಂತಹವನಾದಡೇನು ಲಿಂಗವ ಮುಟ್ಟದವನೆ ಕೀಳುಜಾತಿ. ಕುಲವಹುದು ತಪ್ಪದು ಲಿಂಗ ಮುಟ್ಟಲೊಡನೆ ಹೊನ್ನಹುದು ತಪ್ಪದು ಪರುಷ ಮುಟ್ಟಲೊಡನೆ. ಕೂಡಲಸಂಗಮದೇವನೊಲ್ಲ ಸರ್ವಸಂದೇಹಿಗಳ.