ಎನಗೆ ಜನನವಾಯಿತ್ತೆಂಬರು ಎನಗೆ ಜನನವಿಲ್ಲವಯ್ಯಾ ಎನಗೆ ಮರಣವಾಯಿತ್ತೆಂಬರು ಎನಗೆ ಮರಣವಿಲ್ಲವಯ್ಯಾ. ಜನನವಾದಡೆ ನಿಮ್ಮ ಪಾದೋದಕ ಪ್ರಸಾದವ ಕೊಂಬೆ ಮರಣವಾದಡೆ ನಿಮ್ಮ ಶ್ರೀಚರಣವನೆಯ್ದುವೆ. ಬಾವನ್ನದ ವೃಕ್ಷವು ಊರೊಳಗಿದ್ದಡೇನು ಅಡವಿಯೊಳಗಿದ್ದಡೇನು ಪರಿಮಳ ಒಂದೇ ಕೂಡಲಸಂಗಮದೇವಾ.