ಎನಗೇಕಯ್ಯಾ? ನಾ ಪ್ರಪಂಚಿನ ಪುತ್ಥಳಿ. ಮಾಯಿಕದ ಮಲಭಾಂಡ ಆತುರದ ಭವನಿಳಯ. ಜಲಕುಂಭದ ಒಡೆಯಲ್ಲಿ ಒಸರುವ ನೆಲೆವನೆಗೇಕಯ್ಯಾ ? ಬೆರಳು ತಾಳಹಣ್ಣ ಹಿಸುಕಿದಡೆ ಮೆಲಲುಂಟೆ ? ಬಿತ್ತೆಲ್ಲಾ ಜೀವ ಅದರೊಪ್ಪದ ತೆರ ಎನಗೆ. ಎನ್ನ ತಪ್ಪನೊಪ್ಪಗೊಳ್ಳಿ ಚೆನ್ನಮಲ್ಲಿಕಾರ್ಜುನದೇವರದೇವ ನೀವೆ ಅಣ್ಣಗಳಿರಾ.