ಎನ್ನಂತರಂಗವೆ ಬಸವಣ್ಣ. ಬಹಿರಂಗವೆ ಮಡಿವಾಳಯ್ಯ ಈ ಉಭಯದ ಸಂಗವೆ ಪ್ರಭುದೇವರು ! ಇಂತೀ ಮೂವರ ಕರುಣದ ಕಂದನಾಗಿ ಬದುಕಿದೆ ಕಾಣಾ ಕೂಡಲಚೆನ್ನಸಂಗಮದೇವಾ.