ಎನ್ನಾಧಾರಚಕ್ರಕ್ಕೆ `ನ' ಕಾರವಾದಾತ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎನ್ನಾಧಾರಚಕ್ರಕ್ಕೆ `ನ' ಕಾರವಾದಾತ ಬಸವಣ್ಣ; ಎನ್ನ ಸ್ವಾಧಿಷಾ*ನಚಕ್ರಕ್ಕೆ `ಮ'ಕಾರವಾದಾತ ಬಸವಣ್ಣ; ಎನ್ನ ಮಣಿಪೂರಚಕ್ರಕ್ಕೆ `ಶಿ'ಕಾರವಾದಾತ ಬಸವಣ್ಣ: ಎನ್ನ ಅನಾಹತಚಕ್ರಕ್ಕೆ `ವ್ಡಾಕಾರವಾದಾತ ಬಸವಣ್ಣ; ಎನ್ನ ವಿಶುದ್ಧಿಚಕ್ರಕ್ಕೆ `ಯ'ಕಾರವಾದಾತ ಬಸವಣ್ಣ; ಎನ್ನ ಆಜ್ಞಾಚಕ್ರಕ್ಕೆ `ಓಂ'ಕಾರವಾದಾತ ಬಸವಣ್ಣ; ಎನ್ನ ಬ್ರಹ್ಮರಂಧ್ರಕ್ಕೆ ಸಾವಿರದೈವತ್ತೆರಡಕ್ಷರವಾದಾತ ಬಸವಣ್ಣ; ಎನ್ನ ಶಿಖಾಚಕ್ರಕ್ಕೆ `ಕ್ಷ'ಕಾರವಾದಾತ ಬಸವಣ್ಣ; ಎನ್ನ ಪಶ್ಚಿಮಚಕ್ರಕ್ಕೆ `ಹ'ಕಾರವಾದಾತ ಬಸವಣ್ಣ; ಇಂತೀ ಎನ್ನ ನವಚಕ್ರಂಗಳಲ್ಲಿಯೂ
ನವನಾಳಗಳಲ್ಲಿಯೂ ನವವಿಧಲಿಂಗಸ್ವರೂಪವಾದಾತ ಬಸವಣ್ಣ. ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ನಿಮ್ಮ ತೋರಿ ಎನ್ನ ಸಲಹಿದ ವರಗುರು ಸಂಗನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ ಪ್ರಭುವೆ.