ಎಡದ ಕೈಯಲು ನಿಗಳವನಿಕ್ಕಿ ಬಲದ ಕೈಯ ಕಡಿದುಕೊಂಡಡೆ ನೋಯದಿಪ್ಪುದೆ ಪ್ರಾಣವೊಂದಾಗಿ ದೇಹ ಬೇರಿಲ್ಲ. ಲಿಂಗವ ಪೂಜಿಸಿ ಜಂಗಮವನುದಾಸೀನವ ಮಾಡಿದಡೆ ಬೆಂದೆನಯ್ಯಾ ನಾನು ಕೂಡಲಸಂಗಮದೇವಾ. 406