ಎನ್ನ ಕಾಯಕ್ಕೆ ಕಾಹ ಹೇಳುವರಲ್ಲದೆ ಮನಕ್ಕೆ ಕಾಹ ಹೇಳುವರಿಲ್ಲಯ್ಯಾ ಅಣಕದ ಮಿಂಡತನಂಗಳ ನೋಡಿ ಕಂಡೆನವ್ವಾ. ಈತನ ಲೀಲೆಗಂಡಾನು ಬೆರಗಾದೆ. ಕೂಡಲಸಂಗಮದೇವ ಎನ್ನ ಮನಕ್ಕೆ ಕಾಹ ಹೇಳಿದನವ್ವಾ