ಎನ್ನ ಕಾಯವ ಬಸವಣ್ಣನಳವಡಿಸಿಕೊಂಡ.


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎನ್ನ ಕಾಯವ ಬಸವಣ್ಣನಳವಡಿಸಿಕೊಂಡ. ಎನ್ನ ಮನವ ಚನ್ನಬಸವಣ್ಣನಳವಡಿಸಿಕೊಂಡ. ಎನ್ನ ಭಾವವ ಮಡಿವಾಳಯ್ಯನಳವಡಿಸಿಕೊಂಡ._ ಇಂತೀ ಮೂವರು ಒಂದೊಂದನಳವಡಿಸಿಕೊಂಡ ಕಾರಣ ಗುಹೇಶ್ವರಾ
ನಿಮ್ಮ ಶರಣರೆಂಬ ತ್ರಿಮೂರ್ತಿಗಳಿಗೆ ನಮೋ ನಮೋ ಎನುತಿರ್ದೆನು.