ಎನ್ನ ಘ್ರಾಣದ ಬಾಗಿಲಲ್ಲಿರ್ದು,


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎನ್ನ ಘ್ರಾಣದ ಬಾಗಿಲಲ್ಲಿರ್ದು
ಸುವಾಸನೆಯ ಸುಖಂಗಳ ಭೋಗಿಸುವಾತ ನೀನಯ್ಯಾ. ಎನ್ನ ಜಿಹ್ವೆಯ ಬಾಗಿಲಲ್ಲಿರ್ದು
ಸುರುಚಿಯ ಸುಖಂಗಳ ಭೋಗಿಸುವಾತ ನೀನಯ್ಯಾ. ಎನ್ನ ನೇತ್ರದ ಬಾಗಿಲಲ್ಲಿರ್ದು
ಸುರೂಪ ಸುಖಂಗಳ ಭೋಗಿಸುವಾತ ನೀನಯ್ಯಾ. ಎನ್ನ ತ್ವಕ್ಕಿನ ಬಾಗಿಲಲ್ಲಿರ್ದು
ಸುಸ್ಪರ್ಶವ ಮಾಡಿ ಆ ಸ್ಪರ್ಶನಸುಖವ ಸುಖಿಸುವಾತ ನೀನಯ್ಯಾ. ಎನ್ನ ಶ್ರೋತ್ರದ ಬಾಗಿಲಲ್ಲಿರ್ದು ಸುಶಬ್ದ ಸುಖಂಗಳ ಭೋಗಿಸುವಾತ ನೀನಯ್ಯಾ. ಎನ್ನ ಮನದ ಬಾಗಿಲಲ್ಲಿರ್ದು ಪಂಚೇಂದ್ರಿಯಂಗಳನರಿದು ಸುಖಿಸುವ ಅರಿವಿನಮೂರ್ತಿ ನೀನಯ್ಯಾ ಅದೇನು ಕಾರಣವೆಂದಡೆ; ನೀನಾಡಿಸುವ ಜಂತ್ರದ ಬೊಂಬೆ ನಾನೆಂದರಿದ ಕಾರಣ. ನಿಮ್ಮ ಕರಣಂಗಳೆ ಎನ್ನ ಹರಣಂಗಳಾಗಿ
ಎನ್ನ ಹರಣಂಗಳೆ ನಿಮ್ಮ ಕಿ(ಕ?)ರಣಂಗಳಾಗಿ ಕೂಡಲಚೆನ್ನಸಂಗಮದೇವಾ ನೀನಾಡಿಸಿದಂತೆ ನಾನಾಡಿದೆನಯ್ಯಾ.