ಎನ್ನ ನಾನರಿಯದಂದು ಮುನ್ನ ನೀನೇನಾಗಿರ್ದೆ ಹೇಳಾ? ಮುನ್ನ [ನೀ] ಬಾಯ ಮುಚ್ಚಿಕೊಂಡಿರ್ದೆ ಎಂಬುದ
ನಾ ನಿನ್ನ ಕಣ್ಣಿಂದ ಕಂಡೆನು
ಎನ್ನ ನಾನರಿದ ಬಳಿಕ ಇನ್ನು ನೀ ಬಾಯಿದೆರೆದು ಮಾತನಾಡಿದಡೆ ಅದನೆನ್ನ ಕಣ್ಣಿಂದ ಕಂಡು ನಾಚಿದೆ ನೋಡಾ. ಎನ್ನ ಕಾಬ ನಿನಗೆ
ನಿನ್ನ ಕಾಬ ಎನಗೆ
ಸಂಬಂಧ ಒಂದೇ ನೋಡಾ! ಗುಹೇಶ್ವರಾ ನಿನ್ನ ಬೆಡಗಿನ ಬಿನ್ನಾಣವ ನಾನರಿದೆ ನೋಡಾ.