ಎನ್ನ ಭಕ್ತಿಯ ಶಕ್ತಿಯು ನೀನೆ ಎನ್ನ ಯುಕ್ತಿಯ ಶಕ್ತಿಯು ನೀನೆ ಎನ್ನ ಮುಕ್ತಿಯ ಶಕ್ತಿಯು ನೀನೆ. ಎನ್ನ ಮಹಾಘನದ ನಿಲವಿನ ಪ್ರಭೆಯನುಟ್ಟು ತಳವೆಳಗಾದ ಸ್ವಯಜ್ಞಾನಿ ಕೂಡಲಸಂಗಯ್ಯನಲ್ಲಿ ಮಹಾದೇವಿಯಕ್ಕಗಳ ನಿಲವ ಮಡಿವಾಳನಿಂದರಿದು ಬದುಕಿದೆನಯ್ಯಾ ಪ್ರಭುವೆ.