ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ ವೃಥಾ ಭ್ರಮೆಗೊಂಡು ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ ! ಕೂಡಲಸಂಗಮದೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ ಅಪರಿಮಿತದ ಸುಖವನೈದದು ನೋಡಾ.