Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಎನ್ನ ಮೀಸಲ ಬೀಸರ ಮಾಡಿದೆಯಲ್ಲಯ್ಯ. ಎನ್ನ ಮೀಸಲ ಬೀಸಾಡಿ ಕಳೆದೆಯಲ್ಲಯ್ಯ. ಎನ್ನ ಭಾಷೆಯ ಪೈಸರ ಮಾಡಿದೆಯಲ್ಲಯ್ಯ. ಎನ್ನ ಭಾಷೆಗೆ ದೋಷವ ತೋರಿಸಿದೆಯಲ್ಲಯ್ಯ. ಎನ್ನ ಮೀಸಲ ಕಾಯವ ನಿಮಗೆಂದಿರಿಸಿಕೊಂಡಿದ್ದಡೆ
ಬೀಸಾಡಿ ಕಳೆವರೆ ಹೇಳಾ ತಂದೆ ? ಏಸು ಕಾಲ ನಿಮಗೆ ನಾನು ಮಾಡಿದ ತಪ್ಪ ಈ ಸಮಯದಲ್ಲಿ ಹೊರಿಸಿ ಕೊಂದೆಯಲ್ಲಾ ಚೆನ್ಮಮಲ್ಲಿಕಾರ್ಜುನಾ.