ಎನ್ನ ಶಿರ ನಿಮ್ಮ ಚರಣವೊರಸೊರಸಿ ಬೆರಸಿ ಭೇದವಿಲ್ಲಯ್ಯಾ ಎನ್ನ ಕಾಯದ ಕಪಟ ಎನ್ನ ಮನದ ವಿಕಾರ ನಿಮ್ಮ ಅಂಗುಷ್ಟದ ಮೊನೆಯ ಸೋಂಕಲೊಡನೆ ಹರಿದುದು ನೋಡಯ್ಯಾ. ಕೂಡಲಸಂಗಮದೇವಯ್ಯಾ ನಿಮ್ಮ ಶ್ರೀಪಾದದ ಬೆಳಗ ಕಂಡು ಎನ್ನ ಅಂತರಂಗದ ಕತ್ತಲೆ ಓಡಿತ್ತು.