Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎರಡೆಂಬತ್ತು ಕೋಟಿ ಗೀತವ ಹಾಡಿದರೇನಯ್ಯಾ ? ಬೆಟ್ಟಕ್ಕೆ ನಾಯಿ ಬೊಗಳಿದಂತಾಯಿತ್ತಯ್ಯಾ. ಮನವು ಘನವ ನೆಮ್ಮದು
ಘನವು ಮನವ ನೆಮ್ಮದು. ಹಾಡಿದರೇನು ಓದಿದರೇನು ? ಗುಹೇಶ್ವರ ನೀನೊಲಿದ ಕಾಲಕ್ಕೆ ಎರಡೆಂಬತ್ತು ಕೋಟಿ ಗೀತವೆಲ್ಲವೂ ನಿಮ್ಮದೊಂದು ಮಾತಿನೊಳಡಕವಯ್ಯಾ.