ಎಲೆಗಳೆದ ವೃಕ್ಷದಂತೆ ಉಲುಹಡರ್ಗಿದೆನಯ್ಯ.


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎಲೆಗಳೆದ ವೃಕ್ಷದಂತೆ ಉಲುಹಡರ್ಗಿದೆನಯ್ಯ. ತೆರೆಯಳಿದ ಅಂಬುಧಿಯಂತೆ ಪರಮ ಶಿವಸಾಗರದೊಳಗೆ ಮುಳುಗಿ ಪರಮ ಚಿದ್ಗಂಭೀರನಾಗಿರ್ದೆನಯ್ಯ. ಘಟವನಳಿದಾಕಾಶದಂತೆ ಬಚ್ಚಬರಿಯ ಬಯಲಾಗಿ ನಿಶ್ಚಲನಾಗಿರ್ದೆನಯ್ಯ. ಪಟವನಳಿದ ಚಿತ್ರದಂತೆ ನಿರ್ಮಲ ನಿರಾವರಣನಾಗಿ ಶುದ್ಧ ಅಮಲಬ್ರಹ್ಮವಾಗಿ ಪ್ರತಿಯಿಲ್ಲದ ಅಪ್ರತಿಮ ಅನುಪಮ ಅಪ್ರಮಾಣ ಅನಾಮಯನು ನೋಡಾ ಶಿವೈಕ್ಯನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.