ಎಲೆಯಿಲ್ಲದ ವೃಕ್ಷ ಉಲಿಯಬಲ್ಲುದೆ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಎಲೆಯಿಲ್ಲದ ವೃಕ್ಷ ಉಲಿಯಬಲ್ಲುದೆ ? ಜಲವಿಲ್ಲದ ತಟಾಕ ತೆರೆಗೊಡಲುಂಟೆ ? ಶಬ್ದಮುಗ್ಧವಾದವಂಗೆ
ನುಡಿಗೆಡೆಯುಂಟೆ ? ಸಮಯವ ಸಾಧಿಸುವನ್ನಬರ ಎಂತು ನಿಜನಿಃಪತಿಯಪ್ಪುದು ? ಭ್ರಾಂತುಮರ್ಕಟನ ವೃಶ್ಚಿಕ ಹೊಯಿದಂತೆ ನಮ್ಮ ಗುಹೇಶ್ವರಲಿಂಗದಲ್ಲಿ ಮರೆದಾಡಬೇಡವೆಲೆ ಭ್ರಾಂತುಯೋಗಿ ಘಟ್ಟಿವಾಳಯ್ಯ.