ಎಲ್ಲರ ದೀಕ್ಷೆಯ ಪರಿಯಂತಲ್ಲ ಎಮ್ಮಯ್ಯನ ದೀಕ್ಷೆ. ನಡೆ ನುಡಿ ಶುದ್ಧವಾದವರಿಗಲ್ಲದೆ ಅನುಗ್ರಹಿಸ ನೋಡಾ. ಪರಮಾರ್ಥಕಲ್ಲದ ಜಡ ನರರನೊಲ್ಲನೊಲ್ಲ ದೀಕ್ಷೆಯ ಕೊಡ ಭವಭಾರಿಗಳ ಮುಖದತ್ತ ನೋಡನಯ್ಯಾ ಕೂಡಲಚೆನ್ನಸಂಗಯ್ಯನೆಂಬ ಜ್ಞಾನಗುರು.