ಏನಿದ್ದಡೇನಿದ್ದಡೊಲ್ಲದು ನಿಮ್ಮನುಭಾವಕ್ಕೆನ್ನ ಮನವು. ಡಂಬಕನೆಂಬವ ನಾನು ಕಂಡಯ್ಯಾ ಕೂಡಲಸಂಗಮದೇವರ ಪೂಜಿಸಿ ಮಾನವರಾಸೆ ಬಿಡದಾಗಿ.