ಐದಾನೆಯ ಬೆನ್ನಲ್ಲಿ ಐದು ಒಂಟೆ ಹೋದವು ಒಂಬತ್ತು ಸಾವಿರ ಕುದುರೆಯನು ಒಂದು ಎಳಗ ಎಯ್ದಿಸುತ್ತಿದ್ದಿತ್ತು. ಅರೆಮರುಳಾದವನ ನೆರೆ ಮರುಳಾದವ ಬಲ್ಲನೆ ? ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ ಇಕ್ಕಿದ ಹಾಲ ಬೆಕ್ಕು ಕುಡಿಯಿತ್ತು ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ