ಐದು ಮುಖದ ಅಂಗನೆಗೆ ಹದಿನೈದು ದೇಹ ನೋಡಾ! ಆ ಅಂಗನೆಯ ಮನೆಯೊಳಗಿರ್ದು ತಾವಾರೆಂಬುದನರಿಯದೆ; ಬಾಯ್ಗೆ ಬಂದಂತೆ ನುಡಿವರು ಗುಹೇಶ್ವರಾ ನಿಮ್ಮನರಿಯದ ಜಡರುಗಳು.